ಉಪಚುನಾವಣೆ ಮೂಂದೂಡಿಕೆಗೆ ಕೇಂದ್ರ ಸರಕಾರ ಹುನ್ನಾರ ನಡೆಸುತ್ತಿದೆ ಎಂದು ಸಚಿವ ಶಿವನಗೌಡ ನಾಯಕ್ ಆರೋಪಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಅಲೆ ವ್ಯಾಪಕವಾಗಿ ಇರುವುದರಿಂದ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ ಎಂದು ದೂರಿದರು.
ಉಪಚುನಾವಣೆಯನ್ನು ಯಾವ ಸಂದರ್ಭದಲ್ಲಿ ನಡೆದರು ಸ್ವತಂತ್ರವಾಗಿ ಎದುರಿಸಲು ಬಿಜೆಪಿ ಸಿದ್ಧವಿದೆ ಎಂದು ತಿಳಿಸಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಮಾತನಾಡಿದ ಸಚಿವರು, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ವಂಚನೆ ನಡೆದಿದೆ. ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ತಿಳಿಸಿದರು. |