ರಾಜ್ಯ ವಿಧಾನಸಭೆಯ ಏಳು ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟಗೊಳಿಸಿರುವ ಹಿನ್ನೆಲೆಯಲ್ಲಿ,ನೀತಿ ಸಂಹಿತೆಯನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಚುನಾವಣಾ ಆಯುಕ್ತ ವಿದ್ಯಾಶಂಕರ್ ಅವರು ಎಚ್ಚರಿಕೆ ನೀಡಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾಗಿರುವ ಕಾರಣ ರಾಜ್ಯದ ಏಳು ಕ್ಷೇತ್ರಗಳಲ್ಲಿ ಯಾವುದೇ ಹೊಸ ಯೋಜನೆ ಘೋಷಿಸುವುದಾಗಲಿ, ಆಶ್ವಾಸನೆ ನೀಡುವುದಾಗಲಿ ಮಾಡಿದಲ್ಲಿ ಆ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಸಂಸದರು, ಶಾಸಕರು ಯಾವುದೇ ಆಶ್ವಾಸನೆ, ಘೋಷಣೆ ನೀಡಿದಲ್ಲಿ ಅದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದೆ ಎಂದು ಸೂಚಿಸಿದ್ದಾರೆ.
ಕಳೆದ ಚುನಾವಣೆಯಂತೆಯೇ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ವಿದ್ಯಾಶಂಕರ್, ಉಪಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹದ್ದಿನಕಣ್ಣು ಇಟ್ಟಿರುವುದಾಗಿ ತಿಳಿಸಿದ್ದಾರೆ. |