ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭಗೊಂಡಿದೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಗೆ ಮತ್ತೆ ಚಿಗುರೊಡೆದರೂ, ಜೆಡಿಎಸ್ ಒಪ್ಪಿಕೊಳ್ಳಲು ಸಿದ್ದವಿಲ್ಲ ಎಂಬ ಸಂದೇಶ ರವಾನಿಸಿದೆ.
ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳನ್ನು ಸೋಲಿಸಲು ಜಾತ್ಯತೀತ ಪಕ್ಷಗಳು ಒಗ್ಗೂಡಬೇಕು. ಇದಕ್ಕಾಗಿ ಕಾಂಗ್ರೆಸ್ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ ಎಂಬ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಹೇಳಿಕೆಯನ್ನು ಜೆಡಿಎಸ್ ತಿರಸ್ಕರಿಸಿದೆ.
ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಹೋರಾಡಲು ಶಕ್ತವಾಗಿದೆ. ಮೈತ್ರಿ ಕುರಿತು ಮಾಧ್ಯಮಗಳ ಮೂಲಕ ಪ್ರಸ್ತಾವನೆಗೆ ಜೆಡಿಎಸ್ ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ನಿರಾಸಕ್ತಿ ಹೊಂದಿದ್ದು, ಈ ಕುರಿತಾದ ಅಂತಿಮ ತೀರ್ಮಾನ ಅವರಿಗೆ ಬಿಟ್ಟಿದ್ದು ಎಂದು ಅವರು ತಿಳಿಸಿದ್ದಾರೆ. |