ಶ್ರೀರಾಮುಲು ಭವಿಷ್ಯದ ಮುಖ್ಯಮಂತ್ರಿ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸೂಕ್ತವಲ್ಲವೆಂಬುದರ ಸೂಚನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಹಲವಾರು ಪ್ರಕರಣಗಳಲ್ಲಿ ಶ್ರೀರಾಮುಲು ಅವರು ಆರೋಪಿ ಎಂದು ಆರೋಪಿಸಿದ ಅವರು, ಇಂಥವರು ಮುಖ್ಯಮಂತ್ರಿಗಳಾದರೆ ಅದು ರಾಜ್ಯದ ದುರ್ದೈವ ಎಂದು ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸಭೆ: ಮುಂಬರುವ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ರಣ ತಂತ್ರ ರೂಪಿಸಲು ಬುಧವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಸಂಘಟನಾ ಸಮಾಲೋಚನಾ ಸಭೆ ನಡೆಸುತ್ತಿದೆ.
ರಾಜ್ಯದಲ್ಲಿ ಚುನಾವಣಾ ಹಿನ್ನೆಲೆಯಲ್ಲಿ ನಾಳೆಯ ಸಭೆಗೆ ಮಹತ್ವ ಬಂದಿದೆ. ಚುನಾವಣಾ ಕಾರ್ಯತಂತ್ರ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವಾರು ಮಹತ್ವದ ನಿರ್ಣಯಗಳನ್ನು ಪಕ್ಷದ ನಾಯಕರು ಸಭೆಯಲ್ಲಿ ಚರ್ಚಿಸುವ ಸಾಧ್ಯತೆಗಳಿವೆ.
ಸಭೆಯ ನೇತೃತ್ವವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಹಿಸಿದ್ದು, ಹಾಲಿ ಹಾಗೂ ಮಾಜಿ ಶಾಸಕರು ಸೇರಿದಂತೆ ಹಲವು ಮುಖಂಡರು ಭಾಗವಹಿಸುವ ನಿರೀಕ್ಷೆ ಇದೆ. |