ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವರ್ಗಾವಣೆ: ಲೋಕಾಯುಕ್ತ ತನಿಖೆಗೆ ರೇವಣ್ಣ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವರ್ಗಾವಣೆ: ಲೋಕಾಯುಕ್ತ ತನಿಖೆಗೆ ರೇವಣ್ಣ ಆಗ್ರಹ
ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತಾವಧಿಯಲ್ಲಿ ನಡೆದಿರುವ ನೌಕರರ ವರ್ಗಾವಣೆಯನ್ನು ಲೋಕಾಯುಕ್ತ ತನಿಖೆ ನಡೆಸುವಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಗ್ರಹಿಸಿದ್ದಾರೆ.

ಯಾರ,ಯಾರ ಕಾಲದಲ್ಲಿ ಎಷ್ಟೆಷ್ಟು ವರ್ಗಾವಣೆ ಆಗಿದೆ. ವರ್ಗಾವಣೆ ಹಿಂದೆ ಯಾರಿದ್ದಾರೆ ಎನ್ನುವುದನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲಿ, ಇಲ್ಲದಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸುಮ್ಮನಿರಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತಾವಧಿಯ ವರ್ಗಾವಣೆಯಲ್ಲಿ ಗಿನ್ನೆಸ್ ದಾಖಲೆ ಮಾಡಿದ್ದಾರೆ ಎಂದು ದೂರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾವು ಆಗ ಹಣಕಾಸು ಸಚಿವ ಹಾಗೂ ಉಪಮುಖ್ಯಮಂತ್ರಿಯಾಗಿದ್ದಾರೆ. ಅದರಲ್ಲ ತನ್ನ ಪಾಲು ಇದೆ ಎನ್ನುವುದನ್ನು ಮರೆತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಪ್ಪು ಮಾಡದಿದ್ದರೆ ಯಾಕೆ ಹೆದರಬೇಕು. ವರ್ಗಾವಣೆಯನ್ನು ತನಿಖೆ ನಡೆಸಲಿ ಎಂದು ಆಗ್ರಹಿಸಿದ ಅವರು ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳಲು ಕುಮಾರಸ್ವಾಮಿ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರೆಡ್ಡಿ ಹೇಳಿಕೆಗೆ ಕುಮಾರಸ್ವಾಮಿ ಲೇವಡಿ
ನೀತಿ ಸಂಹಿತೆ: ಸಚಿವ ಉದಾಸಿಗೆ ತಟ್ಟಿದ ಬಿಸಿ
ಮೈತ್ರಿ ಹೈಕಮಾಂಡ್‌ಗೆ ಬಿಟ್ಟ ವಿಚಾರ: ದೇಶಪಾಂಡೆ
ಜೆಡಿಎಸ್ ಟ್ರಾಫಿಕ್ ಜಾಮ್ : ಎಸಿಪಿ ತಲೆದಂಡ?
ಡಿ.ವಿ. ತಿರುಗೇಟಿಗೆ ತೆಪ್ಪಗಾದ ವರ್ತೂರು
ಕುತೂಹಲ ಹುಟ್ಟಿಸಿದ ಗೌಡರ ಖಾಕಿ ಕವರ್ ಪೂಜೆ!