ರೈತರ ಹಿತದೃಷ್ಟಿಯಿಂದ ನಂದಿನಿ ಹಾಲಿನ ದರ ಏರಿಕೆ ಅನಿವಾರ್ಯ ಎಂದು ಮಾಜಿ ಸಚಿವ ಹಾಗೂ ಕೆಎಂಎಫ್ ಅಧ್ಯಕ್ಷ ಎಚ್.ಡಿ. ರೇವಣ್ಣ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ಬೆಲೆ ಏರಿಕೆ ಮಾಡುವ ಕುರಿತು ಕೆಎಂಎಫ್ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.
2001ರಿಂದ ನಡೆದಿರುವ ನೇಮಕಾತಿ ಹಾಗೂ ವ್ಯವಹಾರಗಳೆಲ್ಲವೂ ಕಾನೂನು ರೀತಿಯಲ್ಲಿಯೇ ನಡೆದಿದೆ. ಆದ್ದರಿಂದ ಸರಕಾರ ನಡೆಸುತ್ತಿರುವ ತನಿಖೆಯಿಂದ ಕೆಎಂಎಫ್‌ಗೆ ಯಾವುದೇ ಹಾನಿಯಿಲ್ಲ ಎಂದು ಅವರು ಹೇಳಿದರು. ಕೆಎಂಎಫ್ ತನಿಖೆಯ ಹೆಸರಿನಲ್ಲಿ ಜೆಡಿಎಸ್ ವಿರುದ್ಧ ಸರಕಾರ ಹಗೆ ತೀರಿಸುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಗಂಭೀರ ಆರೋಪ ಮಾಡಿದರು. |