ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜೆಡಿಎಸ್-ಕಾಂಗ್ರೆಸ್ ನಡುವೆ ಬಂಗಾರು ಸಂಧಾನ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜೆಡಿಎಸ್-ಕಾಂಗ್ರೆಸ್ ನಡುವೆ ಬಂಗಾರು ಸಂಧಾನ
ರಾಜ್ಯದಲ್ಲಿ ಬಿಜೆಪಿಯನ್ನು ಸದೆಬಡಿಯಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಗೆ ಮಧ್ಯಸ್ತಿಕೆ ವಹಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರವಾಣಿ ಮುಖೇನ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರನ್ನು ಸಂಪರ್ಕಿಸಿರುವ ಬಂಗಾರಪ್ಪ ಜೆಡಿಎಸ್ ಜೊತೆ ಹೊಂದಾಣಿಕೆ ನಡೆಸುವಂತೆ ಸಲಹೆ ನೀಡಿದ್ದಲ್ಲದೆ, ಮಾತುಕತೆಗೆ ದಿನಾಂಕವನ್ನು ನಿಗದಿಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಂಗಾರಪ್ಪ, ದುರಾಡಳಿತ ನಡೆಸುತ್ತಿರುವ ಬಿಜೆಪಿಯನ್ನು ಉಪಚುನಾವಣೆಯಲ್ಲಿ ಸೋಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿ ಎಂಬ ಉದ್ದೇಶದಿಂದ ಅವರೆಡೂ ಪಕ್ಷಗಳ ಮಧ್ಯೆ ಮಾತುಕತೆಗೆ ಮುಂದಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಬಂಗಾರಪ್ಪ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಜೆಡಿಎಸ್ ಮೈತ್ರಿಗೆ ಮುಂದಾಗಿದ್ದಾಗ ಕಾಂಗ್ರೆಸ್ ಪಕ್ಷದಿಂದ ಸಕಾತರಾತ್ಮಕ ಪ್ರತಿಕ್ರಿಯೆ ಬರಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಬಾಗಿಲಿಗೆ ಹೋಗಲು ಜೆಡಿಎಸ್‌ಗೆ ಇಷ್ಟವಿಲ್ಲ. ಮೊದಲು ಬಂಗಾರಪ್ಪನವರು ಕಾಂಗ್ರೆಸ್ ಮನವೊಲಿಸಲಿ. ಬಳಿಕ ಮುಂದಿನ ಹೆಜ್ಜೆ ಸಾಧ್ಯ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ವರ್ಗಾವಣೆ: ಲೋಕಾಯುಕ್ತ ತನಿಖೆಗೆ ರೇವಣ್ಣ ಆಗ್ರಹ
ರೆಡ್ಡಿ ಹೇಳಿಕೆಗೆ ಕುಮಾರಸ್ವಾಮಿ ಲೇವಡಿ
ನೀತಿ ಸಂಹಿತೆ: ಸಚಿವ ಉದಾಸಿಗೆ ತಟ್ಟಿದ ಬಿಸಿ
ಮೈತ್ರಿ ಹೈಕಮಾಂಡ್‌ಗೆ ಬಿಟ್ಟ ವಿಚಾರ: ದೇಶಪಾಂಡೆ
ಜೆಡಿಎಸ್ ಟ್ರಾಫಿಕ್ ಜಾಮ್ : ಎಸಿಪಿ ತಲೆದಂಡ?