ವರಮಾನ ಸಂಗ್ರಹ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಎರಡು ದಿನಗಳ ಕಾಲ ನಗರದಲ್ಲಿ ನಡೆದ ಕ್ಷೇತ್ರವಾರು ಶಾಸಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬೊಕ್ಕಸಕ್ಕೆ ಬರುವ ವರಮಾನದಲ್ಲಿ ಎಷ್ಟು ಕಡಿಮೆಯಾಗಲಿದೆ ಎಂದು ಆರ್ಥಿಕ ಸಲಹೆಗಾರರು ಮತ್ತು ಅದಿಕಾರಿಗಳೊಂದಿಗೆ ಆದಷ್ಟು ಬೇಗ ಸಮಾಲೋಚನೆ ನಡೆಸಲಾಗುವುದು ಎಂದರು.
ಸರಕಾರದ ಬೊಕ್ಕಸಕ್ಕೆ ಬರುವ ಆದಾಯದಲ್ಲಿ ಕುಸಿತವಾಗುವ ಹಿನ್ನೆಲೆಯಲ್ಲಿ ಅನಗತ್ಯ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ನಷ್ಟವನ್ನು ಹೇಗೆ ಸರಿದೂಗಿಸಿಕೊಳ್ಳಬಹುದು, ಇದನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಆದಷ್ಟು ಬೇಗ ಚರ್ಚೆ ನಡೆಸಿ ತೀರ್ಮಾನಕ್ಕೆ ಬರುತ್ತೇವೆ ಎಂದು ಹೇಳಿದರು. |