ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಪಚುನಾವಣೆ: ಕಾನೂನು ಸುವ್ಯವಸ್ಥೆಗೆ ಸೂಚನೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಪಚುನಾವಣೆ: ಕಾನೂನು ಸುವ್ಯವಸ್ಥೆಗೆ ಸೂಚನೆ
ಉಪಚುನಾವಣೆ ನಡೆಯಲಿರುವ ಆರು ಜಿಲ್ಲೆಗಳಲ್ಲಿ ಮದ್ಯ ಸಾಗಾಣಿಕೆ, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ತೀವ್ರ ನಿಗಾ ವಹಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ಸೂಚನೆ ನೀಡಿದ್ದಾರೆ.

ನಗರದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ಜಿಲ್ಲೆಗಳ ಜಿಲ್ಲಾಧಿಕಾಗಳಿಗ ಜತೆ ಸಭೆ ನಡೆಸಿ ಚುನಾವಣಾ ಸಿದ್ಧತೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

ಈ ಬಾರಿಯ ಉಪಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುವುದು. ಹೀಗಾಗಿ ಮತಗಟ್ಟೆಗಳು ಮತ್ತಿತರ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ದೊಡ್ಡಬಳ್ಳಾಪುರ ಕ್ಷೇತ್ರ ಹೊರತುಪಡಿಸಿ ಉಳಿದ ಆರು ಕ್ಷೇತ್ರಗಳಲ್ಲಿ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ನೀಡುವ ಕಾರ್ಯಕ್ರಮ ಶೇ.90ರಿಂದ 95ರಷ್ಟು ಪೂರ್ಣಗೊಳ್ಳಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನನ್ನ ಮೇಲೆ ಮಾಟ ಮಾಡಿದ್ದಾರೆ: ಬಚ್ಚೇಗೌಡ
ಅನಗತ್ಯ ವೆಚ್ಚಕ್ಕೆ ಕಡಿವಾಣ: ಯಡಿಯೂರಪ್ಪ
ಜೆಡಿಎಸ್-ಕಾಂಗ್ರೆಸ್ ನಡುವೆ ಬಂಗಾರು ಸಂಧಾನ
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ವರ್ಗಾವಣೆ: ಲೋಕಾಯುಕ್ತ ತನಿಖೆಗೆ ರೇವಣ್ಣ ಆಗ್ರಹ
ರೆಡ್ಡಿ ಹೇಳಿಕೆಗೆ ಕುಮಾರಸ್ವಾಮಿ ಲೇವಡಿ