ಪಕ್ಷ ರಾಜಕಾರಣವನ್ನು ಬಿಟ್ಟು, ಜನಪ್ರತಿನಿಧಿಗಳು ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡಬೇಕಾಗಿದೆ ಎಂದು ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರು ಶಾಸಕರಿಗೆ ನೀತಿ ಪಾಠ ಬೋಧಿಸಿದರು.
ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆದ ಶಾಸಕರ ಪ್ರಶಿಕ್ಷಣ ಶಿಬಿರದಲ್ಲಿ ಶನಿವಾರ ಕಲಾಂ ಅವರು ಉಪನ್ಯಾಸ ನೀಡುತ್ತಾ, ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟು ನಿರೀಕ್ಷಿತ ಮಟ್ಟದಲ್ಲಿ ಏಳಿಗೆ ಸಾಧಿಸಲು ಪಕ್ಷಾತೀತವಾಗಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಾಸಕರು ಕ್ರಿಯಾಶೀಲರಾಗಿದ್ದಾಗ ಮಾತ್ರ ನಿರೀಕ್ಷಿತ ಗುರಿ ಮುಟ್ಟಲು ಸಾಧ್ಯ ಎಂದು ಅವರು ತಿಳಿಸಿದರು. ಜನಪ್ರತಿನಿಧಿಗಳು ದೇಶದ ಅಭಿವೃದ್ದಿಗೆ ಹೆಚ್ಚಿನ ಗಮನ ಕೊಡಬೇಕಾದ ಅಗತ್ಯ ಇದೆ ಎಂದು ನುಡಿದರು.
ಶಾಸಕರಿಗೆ ಶನಿವಾರದಿಂದ ಮೂರು ದಿನಗಳ ಕಾಲ ಈ ಶಿಬಿರ ನಡೆಯಲಿದ್ದು, ಪ್ರಥಮ ದಿನದ ಶಿಬಿರದಲ್ಲಿ ಹಲವಾರು ಮಂದಿ ಶಾಸಕರು ಗೈರು ಹಾಜರಾಗಿದ್ದರು. |