ಚುನಾವಣೆಯಲ್ಲಿ ಅಕ್ರಮ ಮದ್ಯದ ಹೊಳೆ ಹರಿಸಲಾಗುತ್ತಿದೆ ಎನ್ನುವ ಜೆಡಿಎಸ್ ನಾಯಕ ದೇವೇಗೌಡರ ಆರೋಪವನ್ನು ಅಬಕಾರಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿರಾಕರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸೋಲಿನ ಭೀತಿಯಿಂದ ಪ್ರತಿಪಕ್ಷಗಳು ಇಂತಹ ಆರೋಪಗಳನ್ನು ಮಾಡುತ್ತಿವೆ. ಇದು ತೀರಾ ಹಾಸ್ಯಾಸ್ಪದ, ಚುನಾವಣೆ ಪ್ರಚಾರದಲ್ಲಿ ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಂಡಿಲ್ಲ ಎಂದರು." ಮಧುಗಿರಿ ಕ್ಷೇತ್ರದ ಉಸ್ತುವಾರಿಯನ್ನು ತಾವು ಹಾಗೂ ಅರವಿಂದ ಲಿಂಬಾವಳಿಯವರು ವಹಿಸಿಕೊಂಡಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಮೊದಲನೇ ಸ್ಥಾನದಲ್ಲಿದೆ. ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದ್ದು, ಜೆಡಿಎಸ್‌ಗೆ ಮೂರನೇ ಸ್ಥಾನವಷ್ಟೇ. ನಾವು ಉಪಚುನಾವಣೆಯಲ್ಲಿ ಎಲ್ಲ 8 ಕ್ಷೇತ್ರಗಳಲ್ಲೂ ಗೆಲ್ಲಲಿದ್ದೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. |