ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಎಸ್ಬಿಐ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಎಸ್ಬಿಐ ರಾಜ್ಯದ ಜನರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಆದರೆ ಕೆಲವು ವರ್ಷಗಳಿಂದ ರಾಜ್ಯದಲ್ಲಿ ಖಾಲಿಯಾಗಿರುವ ಹುದ್ದೆಗಳಿಗೆ ಹಿಂದಿ ಜನರನ್ನು ಆಯ್ಕೆ ಮಾಡುವ ಮೂಲಕ ಕನ್ನಡಿಗೆ ಅನ್ಯಾಯವೆಸಗಿದ್ದಾರೆ ಎಂದು ದೂರಿದ್ದಾರೆ.
ಫೆಬ್ರವರಿಯಲ್ಲಿ ನಡೆದ ಪರೀಕ್ಷೆಯಲ್ಲಿ ಕನ್ನಡಿಗರನ್ನು ಕಡೆಗೆಣಿಸಲಾಗಿದೆ. ಗುಮಾಸ್ತರಿಂದ ಹಿಡಿದು ಉನ್ನತ ಮಟ್ಟದ ಹುದ್ದೆಗಳಿಗೆ ಪರಭಾಷಿಗರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡಿ ಗ್ರಾಮೀಣ ಮಟ್ಟದಲ್ಲಿ ತಮ್ಮ ಬ್ಯಾಂಕ್ ಉತ್ತಮ ಸೇವೆ ನೀಡಲು ಮುಂದಾಗಬೇಕು. ಇಲ್ಲವಾದರೆ ಬ್ಯಾಂಕಿನ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆ ಹೇಳಿದೆ. |