ರಾಜ್ಯದಲ್ಲಿ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕೇಂದ್ರ ಯುಪಿಎ ಸರ್ಕಾರ ಜಾಹೀರಾತು ಪ್ರಕಟಿಸುತ್ತಿರುವುದು ಚುನಾವಣಾ ನೀತಿಸಂಹಿತೆಯ ಉಲ್ಲಂಘನೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿರುವ ಬಿಜೆಪಿ, ಕೇಂದ್ರ ಸರ್ಕಾರದ ಯೋಜನೆಗಳನ್ನು ತಿಳಿಸುವ ಜಾಹೀರಾತು ನೀಡುತ್ತಿರುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ವಿಷಯ ಕೇಂದ್ರ ಸರ್ಕಾರಕ್ಕೆ ತಿಳಿದಿದ್ದರೂ ಕನ್ನಡ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದ್ದು, ಜನರ ಗಮನ ಸೆಳೆಯಲು ಪ್ರಯತ್ನಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಕೂಡಲೇ ನೋಟಿಸ್ ಜಾರಿಮಾಡಬೇಕು, ಮತ್ತು ಕನ್ನಡದ ಪತ್ರಿಕೆಗಳಲ್ಲಿ ಜಾಹೀರಾತು ನೀಡುವುದನ್ನು ತಡೆಹಿಡಿಯಬೇಕೆಂದು ಬಿಜೆಪಿ ದೂರಿನಲ್ಲಿ ಮನವಿ ಮಾಡಿದೆ.
|