ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಬಿಜೆಪಿಗೆ ಸೇರುವುದಾದರೆ ಅವರಿಗೆ ಬಿಜೆಪಿ ಬಾಗಿಲು ತೆರಿದಿದೆ, ಅವರನ್ನು ಬಿಜೆಪಿ ಹಾರ್ದಿಕವಾಗಿ ಸ್ವಾಗತಿಸಲು ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ತೊರೆದು ಬಿಜೆಪಿ ಸೇರಲು ಬಯಸಿದಲ್ಲಿ ಬಿಜೆಪಿ ಸ್ವಾಗತಿಸುತ್ತದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಡೆಯುವ ಉಪಚುನಾವಣೆಯ ಎಲ್ಲ ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಅದೇ ರೀತಿ ರಾಜ್ಯದಲ್ಲಿ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಒಪ್ಪಿರುವ ಜನತೆ ಪಕ್ಷದ ಅಭ್ಯರ್ಥಿ ಕೆ. ಶಿವನಗೌಡ ನಾಯಕರನ್ನು ಆಯ್ಕೆಮಾಡಲಿದ್ದಾರೆಂದು ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು. |