ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಭೂಗಳ್ಳರ ಮೇಲೆ ಕ್ರಮಕ್ಕೆ ರಾಮಸ್ವಾಮಿ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭೂಗಳ್ಳರ ಮೇಲೆ ಕ್ರಮಕ್ಕೆ ರಾಮಸ್ವಾಮಿ ಆಗ್ರಹ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಅಂದಾಜು 1 ಲಕ್ಷ ಕೋಟಿ ಮೌಲ್ಯದ 1 ಲಕ್ಷ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದ್ದು, ಇದುವರೆಗೂ ಒತ್ತುವರಿದಾರರ ವಿರುದ್ಧ ಯಾವ ಕ್ರಮವನ್ನು ಸರ್ಕಾರ ಕೈಗೊಂಡಂತೆ ಕಾಣುತ್ತಿಲ್ಲ ಎಂದು ಮಾಜಿ ಶಾಸಕ ಹಾಗೂ ವಿಧಾನ ಮಂಡಲದ ಜಂಟಿ ಸದನಸಮಿತಿಯ ಮಾಜಿ ಅಧ್ಯಕ್ಷ ಎ.ಟಿ. ರಾಮಸ್ವಾಮಿ ವಿಷಾದಿಸಿದ್ದಾರೆ.

ನಾಡಿನ ನೆಲವನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಕರುಣಾಕರ ರೆಡ್ಡಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸಿರುವವರ ವಿರುದ್ಧ ಯುದ್ದೋಪಾದಿಯಲ್ಲಿ ಕ್ರಮ ಕೈಗೊಳ್ಳುವಂತೆ ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು ಜಿಲ್ಲೆಯಲ್ಲಿ ಸುಮಾರು 1 ಲಕ್ಷ ಎಕರೆ ಸರ್ಕಾರಿ ಭೂಮಿ ಕಬಳಿಸಿದ್ದು, ರಾಜ್ಯಾದ್ಯಂತ 3 ರಿಂದ 4 ಲಕ್ಷ ಎಕರೆ ಸರ್ಕಾರಿ ಭೂಮಿ ಕಬಳಿಸಲಾಗಿದೆ. ಭೂಮಿ ಕಬಳಿಕೆದಾರರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳದೇ ಹೋದರೆ ಸಾಹಿತಿಗಳು, ಪರಿಸರವಾದಿಗಳು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜನಪರ ಕಾಳಜಿವುಳ್ಳವರೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದರು.

ಬೆಂಗಳೂರಿನ ಅಭಿವೃದ್ದಿಗೆ ಅಗತ್ಯವಾಗಿರುವ ಮಾಸ್ಟರ್‌ಪ್ಲಾನ್ ನಿಗದಿ ಮಾಡದ ಹೊರತು ಭೂಮಿಯನ್ನು ಹರಾಜು ಮಾಡುವುದು ಸರಿಯಾದ ಕ್ರಮವಲ್ಲ. ಒತ್ತುವರಿ ಜಮೀನಿನಲ್ಲಿ ಸರ್ಕಾರಿ ಏಜೆನ್ಸಿಗಳ ಮೂಲಕ ಬಡವರಿಗೆ ನಿವೇಶನ ಕಲ್ಪಿಸುವ ಯೋಜನೆ ರೂಪಿಸಬೇಕಿದೆ. ಆಸ್ಪತ್ರೆ, ಸ್ಕೂಲು, ಕಾಲೇಜು, ಉದ್ಯಾನವನಗಳಿಗೆ ಜಾಗಮೀಸಲಿಟ್ಟು ಉಳಿದ ಭೂಮಿಯನ್ನು ಹರಾಜು ಮಾಡುವುದು ಅತ್ಯಂತ ಸೂಕ್ತ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ: ರೆಡ್ಡಿ
ಅಕ್ರಮ ಗಣಿಗಾರಿಕೆ: ಸರ್ಕಾರಕ್ಕೆ ವರದಿ ಸಲ್ಲಿಕೆ
ಚೋಳರ ಕಾಲದ ವಿಗ್ರಹ ಕಳ್ಳರ ಬಂಧನ
ಮಾಜಿ ಸಚಿವ ಎಚ್.ಎನ್.ನಂಜೇಗೌಡ ಇನ್ನಿಲ್ಲ
ಮದ್ದೂರು ಪ್ರಚಾರಕ್ಕೆ ನಟಿ ರಮ್ಯಾ ರಂಗು?
ಸಿದ್ದುಗೆ ಬಿಜೆಪಿಯ ಹಾರ್ದಿಕ ಸ್ವಾಗತವಿದೆ: ಶ್ರೀರಾಮುಲು