ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗಣಿ ವರದಿ ಅಧಿವೇಶನದಲ್ಲಿ ಚರ್ಚೆಯಾಗಲಿ: ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗಣಿ ವರದಿ ಅಧಿವೇಶನದಲ್ಲಿ ಚರ್ಚೆಯಾಗಲಿ: ಕುಮಾರಸ್ವಾಮಿ
ಲೋಕಾಯುಕ್ತರು ನೀಡಿರುವ ಗಣಿಗಾರಿಕೆ ಅಕ್ರಮ ಕುರಿತ ವರದಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ವಿಧಾನಸಭಾ ಚುನಾವಣಾ ಪ್ರಚಾರ ಸಮಯದಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಗಣಿಗಾರಿಕೆಗೆ ಸಂಬಂಧಿಸಿದಂತೆ ಅವ್ಯವಹಾರ ಕುರಿತು ಸರ್ಕಾರಕ್ಕೆ ಇತ್ತೀಚೆಗೆ ವರದಿ ಸಲ್ಲಿಸಿದ್ದಾರೆ. ಈ ವರದಿ ಆಧಾರದ ಮೇಲೆ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಗಳಿಗೆ ಇಷ್ಟೊಂದು ತರಾತುರಿ ಏಕೆ ಎಂದು ಪ್ರಶ್ನಿಸಿದ ಅವರು, ಗಣಿಗಾರಿಕೆಯ ಅವ್ಯವಹಾರ ಒಂದು ಅಧ್ಯಾಯದಿಂದ ತಿಳಿಯಲಾರದು. ಆದ್ದರಿಂದ ಮುಂದಿನ ವರದಿ ಬಂದ ನಂತರ ಸವಿಸ್ತಾರವಾಗಿ ಚರ್ಚೆ ನಡೆಯಲಿ ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ಇದೀಗ ರಾಜ್ಯದಲ್ಲಿ ನಡೆಯುತ್ತಿರುವ 8 ವಿಧಾನಸಭಾ ಉಪಚುನಾವಣೆಯ ಪ್ರಚಾರದಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ. ಆಯಾ ಭಾಗದ ಜನರು ಪಕ್ಷದ ಕರೆಗೆ ಸ್ಪಂದಿಸುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಚ್ಚರಿಯ ಫಲಿತಾಂಶ ನೀಡಲಿದೆ ಎಂದು ಅವರು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಣಿ ಆರೋಪಿಗಳಿಗೆ ಯಾವುದೇ ದಾಕ್ಷಿಣ್ಯ ಇಲ್ಲ: ಸಿಎಂ
ಉಪಚುನಾವಣೆ: ಡಿ.24ರಿಂದ ಮದ್ಯ ಮಾರಾಟ ನಿಷೇಧ
ಗಣಿ ವರದಿ ಸಿಬಿಐ ತನಿಖೆಯಾಗಲಿ: ಧರ್ಮಸಿಂಗ್
ದುಬಾರಿ ಶುಲ್ಕ ಬೇಡ: ಸಿಎಂ ಸೂಚನೆ
ಕುಮಾರ್ ಅವಧಿ ಗಣಿ ಅಕ್ರಮ ತನಿಖೆಯಾಗಲಿ: ಧನಂಜಯಕುಮಾರ್
ಪೋಲಿಯೋ ಆವಾಂತರಕ್ಕೆ ಕಂಪನಿಗಳ ಲಾಬಿ ಕಾರಣ?