ಈ ಬಾರಿಯ ನಾಡೋಜ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ನಾಡಿನ ಐವರು ಸಾಧಕರಿಗೆ ಪ್ರಶಸ್ತಿ ನೀಡಲು ಹಂಪಿ ವಿಶ್ವವಿದ್ಯಾಲಯ ತೀರ್ಮಾನಿಸಿದೆ.
ಸಾಹಿತಿಗಳಾದ ಜ್ಞಾನಪೀಠ ಪ್ರಶಸ್ತಿ ಪುಸ್ಕೃತ ಸಾಹಿತಿ ಡಾ| ಯು.ಆರ್. ಅನಂತಮೂರ್ತಿ, ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ. ಎಲ್. ಬಸವರಾಜು, ಕಮಲಾ ಹಂಪನ, ಶ್ರೀನಿವಾಸ ಹಾವನೂರು ಹಾಗೂ ತೊಗಲು ಬೊಂಬೆ ಕಲಾವಿದ ಹೆಡ್ರಮನಹಳ್ಳಿಯ ಭರಮಪ್ಪ ಅವರಿಗೆ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿರುವುದಾಗಿ ಹಂಪಿ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಈ ತಿಂಗಳ ಅಂತ್ಯದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ ಠಾಕೂರ್ ಗಣ್ಯರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿ ಪ್ರದಾನ ಮಾಡುವರೆಂದು ವಿಶ್ವವಿದ್ಯಾಲಯ ತಿಳಿಸಿದೆ. |