ರಾಜ್ಯದಲ್ಲಿ ಮತ್ತೆ ಉಪಚುನಾವಣೆ ನಡೆಯುತ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಹೀಗೆ ಹೇಳುವ ಮೂಲಕ ಚುನಾವಣೆ ನಂತರವೂ ಯಡಿಯೂರಪ್ಪ ಆಪರೇಷನ್ ಕಮಲ ಮುಂದುವರಿಸುವ ಸೂಚನೆ ನೀಡಿದ್ದಾರೆ.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿಗಳು ಮತ್ತೆ ಚುನಾವಣೆ ಆಗಬಾರದು ಎನ್ನುವುದು ನಮ್ಮ ಆಸೆ. ಆದರೆ ಅಂತಹ ಪರಿಸ್ಥಿತಿ ಬಂದರೆ ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ಈ ಚುನಾವಣೆ ಮುಗಿದ ನಂತರ ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ತಾ.ಪಂ. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಬರಲಿದ್ದಾರೆ ಎಂದು ತಿಳಿಸಿದರು.
ಪೂಜಾರಿಯವರ ಟೀಕೆಗಳನ್ನು ಕುರಿತು ಸುದ್ದಿಗಾರರ ಪ್ರಶ್ನಿಸಿದಾಗ ಪೂಜಾರಿಯವರ ಪ್ರಶ್ನೆಗಳಿಗೆಲ್ಲ ಉತ್ತರಿಸಲು ಸಾಧ್ಯವಿಲ್ಲ. ಬಿಜೆಪಿಯ ಜನಪ್ರಿಯತೆ ಕಂಡು ಅವರಿಗೆ ದಿಕ್ಕೇ ತೋಚುತ್ತಿಲ್ಲ ಎಂದರು. |