ಸಮಾಜ ಕಲ್ಯಾಣ ಇಲಾಖೆಯಡಿ ಯಾವುದೇ ಇಲಾಖೆ ಮತ್ತು ನಿಗಮಗಳನ್ನು ವಿಲೀನಗೊಳಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿಗಳ ಸಚಿವಾಲಯ ಸ್ಪಷ್ಟಪಡಿಸಿದೆ.
ಡಾ. ಅಂಬೇಡ್ಕರ್ ಅಭಿವೃದ್ದಿ ನಿಗಮ, ದೇವರಾಜ ಅರಸು ಅಭಿವೃದ್ದಿ ನಿಗಮ ಮತ್ತು ಇತರ ನಿಗಮಗಳ ಪ್ರತ್ಯೇಕ ಅಸ್ತಿತ್ವ ಮುಂದುವರಿಯುತ್ತದೆ ಇಲಾಖೆ ಪುನಾರಚನೆ ಸಂಬಂಧ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯನಿರ್ವಹಣೆ ಉತ್ತಮಪಡಿಸುವ ಉದ್ದೇಶದಿಂದ ಸಮಾಜಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಂಬೇಡ್ಕರ್ ಅಭಿವೃದ್ದಿ ನಿಗಮ, ಪರಿಶಿಷ್ಟ ವರ್ಗಗಳ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಪ್ರತ್ಯೇಕ ಅಸ್ತಿತ್ವದೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಒಬ್ಬ ಜಂಟಿ ನಿರ್ದೇಶಕ, ಉಪನಿರ್ದೇಶಕರ ಮೇಲ್ವಿಚಾರಣೆಗೆ ಒಳಪಡಿಸುವ ಉದ್ದೇಶದೊಂದಿಗೆ ಈ ಆದೇಶ ಹೊರಡಿಸಲಾಗಿತ್ತು. ಅದನ್ನು ಕೈಬಿಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. |