ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಅವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರಿಬ್ಬರನ್ನೂ ಬಂಧಿಸುವಂತೆ ಒತ್ತಾಯಿಸಿದೆ.
ಮಧುಗಿರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿಯವರು ಹಾಗೂ ರೇವಣ್ಣ ಅವರು ಚುನಾವಣಾ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬಿಜೆಪಿಯ ವಕ್ತಾರ ಧನಂಜಯ್ ಕುಮಾರ್ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವ ಕುಮಾರಸ್ವಾಮಿ ಹಾಗೂ ರೇವಣ್ಣ ಅವರನ್ನು ಚುನಾವಣಾ ಆಯೋಗ ಬಂಧಿಸಬೇಕೆಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ. ಜೆಡಿಎಸ್ ಕಾರ್ಯವೈಖರಿ ಬಗ್ಗೆ ಈ ಸಂದರ್ಭದಲ್ಲಿ ಧನಂಜಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. |