ರಾಜ್ಯದಲ್ಲಿ ನಡೆದಿರುವ ಎಂಟು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಬಗ್ಗೆ ಜನತೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಬಿಜೆಪಿ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಘಟಕವು ಸರ್ವ ಸನ್ನದ್ಧವಾಗಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಗತಿಯಲ್ಲಿದ್ದು, ಸದ್ಯದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಬೆಳಗಾವಿಯಲ್ಲಿ ನಡೆದಿರುವ ಚುನಾವಣಾ ಮತಯಂತ್ರದ ಬಸ್ ಅಪಘಾತ ಪ್ರಕರಣದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಕರಣದಲ್ಲಿ ಬಿಜೆಪಿ ಕೈವಾಡವಿಲ್ಲ ಎಂದು ಸ್ಪಷ್ಟಪಡಿಸಿದರು. |