ಮೇವರಿಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸರ್ಕಾರ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದೆ.
ಮೇವರಿಕ್ ವಸತಿ ಸಂಕೀರ್ಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಲಂಚ ಸ್ವೀಕಾರಿಸಿದ್ದರೆಂದು ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು.
ಇದನ್ನು ತೀವ್ರವಾಗಿ ಖಂಡಿಸಿದ ಆಡಳಿತಾರೂಢ ಬಿಜೆಪಿ ಸಿವಿಲ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿವಿಲ್ ನ್ಯಾಯಾಲಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದೆ.
ಈಜಿಪುರ ವಸತಿ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು 50 ಕೋಟಿ ಲಂಚ ಸ್ವೀಕರಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. |