ಹುಕ್ಕೇರಿಯಲ್ಲಿ ಮತಯಂತ್ರಗಳಿದ್ದ ಬಸ್ ಅಪಘಾತ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಈ ಅಪಘಾತಕ್ಕೆ ಚಾಲಕನ ಅನಾರೋಗ್ಯವೇ ಕಾರಣವಾಗಿದ್ದು, ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಪಘಾತ ನಡೆದ ಅರ್ಧಗಂಟೆಯಲ್ಲಿ ಜಿಲ್ಲಾಧಿಕಾರಿಗಳು ಅಲ್ಲಿ ಹಾಜರಿದ್ದರು. ಅಲ್ಲದೆ, ಮತಯಂತ್ರಗಳನ್ನು ವರ್ಗಾವಣೆ ಮಾಡುವ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ ಎಂದು ಹೇಳಿದ್ದಾರೆ.
ಈ ಘಟನೆಯ ಕುರಿತು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಅಸಮಧಾನಗೊಂಡಿದ್ದು, ಮರುಚುನಾವಣೆ ನಡೆಸುವಂತೆ ಆಗ್ರಹಿಸಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. |