ಬಯೋಕಾನ್ ವಿರುದ್ಧ ಪರಿಸರಕ್ಕೆ ತೀವ್ರ ಧಕ್ಕೆಯಾಗುತ್ತಿದ್ದರೂ ಅದರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸದಸ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯ ವಿಜಯಕುಮಾರ್ ಮಾತನಾಡಿ, ಬಯೋಕಾನ್ ಸಂಸ್ಥೆಯಿಂದ ಆಗುತ್ತಿರುವ ಪರಿಸರ ಹಾನಿಯ ಕುರಿತು ನಿರ್ಲಕ್ಷ್ಯ ಸಲ್ಲದು. ಇದನ್ನು ತಡೆಯಲು ಕಂಪನಿಯ ವಿರುದ್ಧ ಸಲ್ಲಿಸಿದ ಮನವಿಗಳೆಲ್ಲ ವ್ಯರ್ಥವಾಗಿದೆ ಎಂದು ಆರೋಪಿಸಿದರು.
ಕೂಡಲೇ ಸಂಸ್ಥೆಗೆ ವಿದ್ಯುತ್ ಕಡಿತಗೊಳಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಹಾಗೆಯೇ ಪರವಾನಗಿ ರದ್ದುಮಾಡುವಂತೆ ಪರಿಸರ ಮತ್ತು ವಾಯುಮಾಲಿನ್ಯ ನಿಯಂತ್ರಣ ಮಂಡಳಿಗೂ ಸೂಚಿಸಲಾಗಿತ್ತು. ಆದರೆ, ಈ ಇಬ್ಬರೂ ಸಂಬಂಧಪಟ್ಟ ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೌಶ ವ್ಯಕ್ತಪಡಿಸಿದರು.
|