ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯಗೆ ಪುನರ್ಜನ್ಮ ನೀಡಿದೆ, ಆದರೆ ಸಿದ್ದರಾಮಯ್ಯ ಕಾಂಗ್ರೆಸ್ ಬೆನ್ನಿಗೆ ಚೂರಿ ಹಾಕಿದ್ದಾರೆ ಹೀಗೆಂದು ಅಭಿಪ್ರಾಯ ವ್ಯಕ್ತಪಡಿಸಿದವರು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ ಮಾತುಗಳು.
ಸಿದ್ದರಾಮಯ್ಯ ಅವರು ತಟಸ್ಥ ಧೋರಣೆ ತಾಳಿ, ಪರೋಕ್ಷವಾಗಿ ಬಿಜೆಪಿ ಗೆಲುವಿಗೆ ಕುಮ್ಮುಕ್ಕು ನೀಡುವ ಮೂಲಕ ಕಾಂಗ್ರೆಸ್‌ಗೆ ಮೋಸ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ದೂರಿದರು.
ಚುನಾವಣೆ ಫಲಿತಾಂಶ ಬಂದ ನಂತರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಜೆಡಿಎಸ್‌ಗೆ ಮೂರು ಸ್ಥಾನ ಗಳಿಸಿಕೊಟ್ಟ ರಾಜ್ಯದ ಮತದಾರರಿಗೆ ಅಭಿನಂದನೆ ಸಲ್ಲಿಸಿದ ನಂತರ ಮಾತನಾಡುತ್ತಿದ್ದರು.
ಇದರ ಜತೆಗೇ ಕಾಂಗ್ರೆಸ್ ಮೇಲೂ ಟೀಕೆಗಿಳಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸಿ ಮೈತ್ರಿ ಒಲ್ಲೆಯೆಂದ ಕಾಂಗ್ರೆಸ್‌ಗೆ ಜನತೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದರು. |