ಎಂಟು ಕ್ಷೇತ್ರಗಳ ಚುನಾವಣೆಯಲ್ಲಿ 5ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕಾರಣರಾದ ಮತದಾರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮತಎಣಿಕೆಯ ಕಾರ್ಯಪೂರ್ಣಗೊಂಡು, ಫಲಿತಾಂಶ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷದ ಅಭಿವೃದ್ಧಿ ಕಾರ್ಯಕ್ರಮ, ಸಾಧನೆಗಳನ್ನು ಗಮನಿಸಿ ಮತದಾರರು ಬಿಜೆಪಿಯನ್ನು ಆಶೀರ್ವದಿಸಿದ್ದಾರೆ ಎಂದು ಹೇಳಿದ ಅವರು, ಪಕ್ಷೇತರರನ್ನು ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.
ಆಪತ್ಕಾಲದಲ್ಲಿ ಸರ್ಕಾರಕ್ಕೆ ಬೆಂಬಲ ನೀಡಿದ ಪಕ್ಷೇತರರನ್ನು ಯಾವುದೇ ಕಾರಣಕ್ಕೂ ಮೂಲೆಗುಂಪು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಪಕ್ಷದ ಸಂಘಟನೆ, ಶಾಸಕ, ಸಚಿವರುಗಳ ಒಗ್ಗಟ್ಟಿನ ಕೆಲಸವೇ ಪಕ್ಷದ ಗೆಲುವಿಗೆ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. |