ಮಂಡ್ಯದಲ್ಲಿ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಮಾದೇಗೌಡರ ಮೇಲೆ ಯಾರೇ ಹಲ್ಲೆ ನಡೆಸಿದ್ದರೂ ಕೂಡ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಮಂಡ್ಯದಲ್ಲಿ ಮಾಜಿ ಸಂಸದ ಹಾಗೂ ಬಿಜೆಪಿಯ ಮುಖಂಡ ಜಿ.ಮಾದೇಗೌಡ ಅವರ ಮೇಲೆ ಪಕ್ಷದ ಕಾರ್ಯಕರ್ತರೆ ಹಲ್ಲೆ ನಡೆಸಿದ್ದರು.
ಮಂಡ್ಯದ ಹೃದಯ ಭಾಗದಲ್ಲಿರುವ ಗಾಂಧಿ ಸ್ಮಾರಕದಲ್ಲಿ ಮಾದೇಗೌಡ ಇರುವುದನ್ನು ಅರಿತ ದುಷ್ಕರ್ಮಿಗಳು ಅವರನ್ನು ಹಿಗ್ಗಾಮುಗ್ಗ ಥಳಿಸಿ ಬಟ್ಟೆಬರೆಗಳನ್ನು ಹರಿದುಹಾಕಿದ್ದರು.
ಮದ್ದೂರು ಉಪಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಈ ಹಲ್ಲೆ ನಡೆದಿದ್ದು, ಈ ಹಲ್ಲೆಯನ್ನು ಬಿಜೆಪಿ ಕಾರ್ಯಕರ್ತರು ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಮದ್ದೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ. |