ಹೊಸ ವರ್ಷದ ಸಂಭ್ರಮಾಚರಣೆಗಾಗಿ ಎಲ್ಲೆಡೆ ಸಿದ್ದತೆ ನಡೆಯುತ್ತಿದ್ದರೆ, ಮತ್ತೊಂದೆಡೆ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.ಹೊಸವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರ ದಾಳಿ ನಡೆಯುವ ಶಂಕೆಯ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ವಿಧಾನಸೌಧ, ಹೈಕೋರ್ಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೇ ರಾತ್ರಿ ಗಸ್ತನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಅಲ್ಲದೇ ಈ ಬಾರಿ ಕರಾವಳಿಯ ಭಾಗದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲೂ ಆಯಾ ಠಾಣೆಗಳಿಗೆ ಸೂಚನೆ ರವಾನಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ವಿವರಿಸಿದ್ದಾರೆ.ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕೈಗೊಳ್ಳಲಾಗಿದ್ದು, ಬೀಚ್, ಬಾರ್ ಹಾಗೂ ಸಂಗೀತ ರಸಮಂಜರಿ ಕಾರ್ಯಕ್ರಮಗಳಿಗೆ ನಿಗದಿತ ಸಮಯದೊಳಗೆ ಕಾರ್ಯಕ್ರಗಳನ್ನು ಮುಗಿಸುವಂತೆ ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. |