ಮೇವರಿಕ್ ವಸತಿ ಸಂಕೀರ್ಣ ನಿರ್ಮಾಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲಂಚ ಆರೋಪ ಹೊರಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ನಗರದ 34ನೇ ಸತ್ರ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.ಈಜಿಪುರ ವಸತಿ ಸಂಕೀರ್ಣ ನಿರ್ಮಾಣ ಯೋಜನೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮೇವರಿಕ್ ಸಂಸ್ಥೆಯಿಂದ 50ಕೋಟಿ ರೂ.ಲಂಚ ಸ್ವೀಕರಿಸಿರುವುದಾಗಿ ಕುಮಾರಸ್ವಾಮಿ ಆರೋಪಿಸಿದ್ದರು. ಈ ಆರೋಪದ ವಿರುದ್ಧ ಸರ್ಕಾರ ಇತ್ತೀಚೆಗಷ್ಟೇ ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಸಮನ್ಸ್ ಜಾರಿ ಮಾಡಿದ್ದು, ಫೆಬ್ರುವರಿ 25ರಂದು ನ್ಯಾಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದಾರೆ. |