ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಿಸಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಅದಕ್ಕಾಗಿ ಪಕ್ಷದ ಕಾರ್ಯಕರ್ತರ ಪಡೆಯನ್ನು ಪ್ರತಿ ಜಿಲ್ಲೆಯಲ್ಲೂ ರಚಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಈ ಯುವಪಡೆ ರಚನೆಗೆ ಉದ್ದೇಶಿಸಿದ್ದು, 500 ಕಾರ್ಯಕರ್ತರನ್ನು ಒಳಗೊಂಡ ತಂಡವು ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಬಲವರ್ಧನೆಯಲ್ಲಿ ತೊಡಗಲಿದೆ ಎಂದು ತಿಳಿಸಿದರು.
ಪಕ್ಷದ ಕಚೇರಿಯಲ್ಲಿ ನಡೆದ ವಿಜಯೋತ್ಸವದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಬಿಜೆಪಿ ಗೆಲುವು ಸಾಧಿಸಲು ರಾಜ್ಯದಲ್ಲಿ ಅನೈತಿಕ ಮಾರ್ಗ ಬಳಸಿದೆ. ನೂರಾರು ಕೋಟಿ ಖರ್ಚು ಮಾಡಿದರೂ ರಾಜ್ಯದ ಮತದಾರ ಅದರ ಆಮಿಷಕ್ಕೆ ಒಳಗಾಗಿಲ್ಲ ಎಂದರು. |