ಮಂಡ್ಯ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಮಹೇಶ್ವರರಾವ್ ಅವರನ್ನು ನೇಮಿಸಿ ಸರ್ಕಾರ ಬುಧವಾರ ಅದೇಶ ಹೊರಡಿಸಿದೆ.
ಮದ್ದೂರು ಉಪಚುನಾವಣೆಯಲ್ಲಿ ಸೋತ ಹತಾಶೆಯಿಂದ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಮಾದೇಗೌಡ ಅವರ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾಧಿಕಾರಿಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗಿತ್ತು.
ಮಂಡ್ಯ ಜಿಲ್ಲಾಧಿಕಾರಿಯವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಿರುವುದಾಗಿ ಸರ್ಕಾರ ಅದೇಶ ಹೊರಡಿಸಿದೆ.
ಹಲ್ಲೆ ಪ್ರಕರಣದಲ್ಲಿ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ನಡೆಸುವುದಾಗಿ ಮಾಜಿಪ್ರಧಾನಿ ದೇವೇಗೌಡ ಬೆದರಿಕೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು. |