ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನತ್ತ ಬೊಟ್ಟು ಮಾಡಿದ್ದು, ತಪ್ಪು ಮಾಡಿದವರು ತಿದ್ದಿಕೊಳ್ಳಬೇಕು, ಇಲ್ಲದಿದ್ದರೆ ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಟಾಂಗು ನೀಡಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಚಾರ ಸಮಿತಿಯ ಅಧ್ಯಕ್ಷರಾಗಿಯೂ, ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಗೈರು ಹಾಜರಾಗಿರುವ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸದೆ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ನೂತನ ಪಕ್ಷ ಕಟ್ಟುತ್ತಾರೆಂಬ ಊಹಾಪೋಹಗಳ ಕುರಿತು ಪ್ರಶ್ನಿಸಿದಾಗ, ಆ ಬಗ್ಗೆ ತಮಗೇನೂ ತಿಳಿದಿಲ್ಲ ಎಂದು ಹೇಳಿದರು.
ಜವಾಬ್ದಾರಿ ವಹಿಸಿದ ಮೇಲೆ ಅವರು ತಮ್ಮ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕಿತ್ತು. ಒಂದು ವೇಳೆ ಅವರು ಮತ್ತೂ ಅಸಮಾಧಾನಗೊಂಡಿದ್ದರೆ ನಾವೇನೂ ಮಾಡುವ ಹಾಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಇರುವುದು, ಬಿಡುವುದು ಅವರ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದರು. |