ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತಿಳಿಸಿದ್ದಾರೆ.
ಹಾಲಿ ಪೊಲೀಸ್ ಮಹಾನಿರ್ದೇಶಕರಾಗಿರುವ ಶ್ರೀಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸೇವಾಜೇಷ್ಠತೆ ಆಧಾರದ ಮೇಲೆ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
2005-06ರಲ್ಲಿ ಬೆಂಗಳೂರು ಪೊಲೀಯ್ ಆಯುಕ್ತರಾಗಿದ್ದ ಡಾ.ಅಜಯ್ ಕುಮಾರ್ ಸಿಂಗ್ ಇದಕ್ಕೂ ಮುಂಚೆ ರಾಜ್ಯದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಡಾ.ಸಿಂಗ್ ಅವರ ಸೇವಾವಧಿ 2ವರ್ಷಗಳ ಕಾಲ ಇರುತ್ತದೆ ಎಂದು ಮುಖ್ಯಮಂತ್ರಿ ಅವರು ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು. |