ಜೆಡಿಎಸ್ ವರಿಷ್ಠ ದೇವೇಗೌಡರೊಂದಿಗೆ ಮುನಿಸಿಕೊಂಡು ಪಕ್ಷ ತೊರೆದಿದ್ದ ಮಾಜಿ ಸಚಿವ ಡಿ.ಟಿ.ಜಯಕುಮಾರ್ ಶುಕ್ರವಾರ ಮರಳಿ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ.ಕಳೆದ ಮೇ ತಿಂಗಳಿನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಟಿಕೆಟ್ ದೊರೆಯಲಿಲ್ಲ ಎಂಬ ಸಿಟ್ಟಿನಿಂದಾಗಿ ಡಿಟಿಜೆಜೆಡಿಎಸ್‌ನಿಂದ ಹೊರನಡೆದಿದ್ದರು. ಇಂದು ಬೆಳಿಗ್ಗೆ ಪಕ್ಷದ ವರಿಷ್ಠ ದೇವೇಗೌಡರ ನಿವಾಸದಲ್ಲಿ ಡಿ.ಟಿ.ಜಯಕುಮಾರ್ ಅವರು ಜೆಡಿಎಸ್‌ಗೆ ಮರಳಿ ಸೇರ್ಪಡೆಗೊಂಡರು. ಪಕ್ಷಕ್ಕೆ ವಾಪಸಾಗಿರುವ ಕುರಿತು ಸಂತಸ ವ್ಯಕ್ತಪಡಿಸಿದ ಗೌಡರು, ಹಿರಿಯ ನಾಯಕರಾಗಿರುವ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.ಜೆಡಿಎಸ್ ತೊರೆದ ಜಯಕುಮಾರ್ ನಂತರ ಬಿಎಸ್ಪಿಗೆ ಸೇರಿ,ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. |