ಸಂಪುಟ ಪುನರ್ ರಚಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ಶುಕ್ರವಾರ ನೂತನವಾಗಿ ಆಯ್ಕೆಗೊಂಡ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಕ್ತಾಯವಾದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.ಸರ್ಕಾರ ಕಷ್ಟ ಕಾಲದಲ್ಲಿದ್ದ ಸಂದರ್ಭದಲ್ಲಿ ಸಹಾಯ ನೀಡಿದ ಪಕ್ಷೇತರರನ್ನು ಯಾವ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಭರವಸೆ ನೀಡಿದರು. ಅಲ್ಲದೇ, ಅವರು ಐದು ವರ್ಷಗಳ ಕಾಲವೂ ಸಚಿವರಾಗಿಯೇ ಮುಂದುವರಿಯಲಿದ್ದಾರೆ ಎಂದರು. |