ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಶಾಲೆಗಳಲ್ಲಿ ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ದೈಹಿಕ ಶಿಕ್ಷಣವನ್ನು ಕಡ್ಡಾಯಗೊಳಿಸುವ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಸಿದ್ಧಗೊಳಿಸಲು ಈಗಾಗಲೇ ನಾಡಿಗೇರ್ ನೇತೃತ್ವದ ಸಮಿತಿಯನ್ನು ರಚಿಸಲಾಗಿದ್ದು, ಇದಕ್ಕಾಗಿ 3 ಕೋಟಿ ರೂ.ಹೆಚ್ಚುವರಿ ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದರು.
ದೈಹಿಕ ಶಿಕ್ಷಣಕ್ಕೆ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಹಣ ಮೀಸಲಿಡಲಾಗುವುದು. ಜೊತೆಗೆ 14 ಸಾವಿರ ದೈಹಿಕ ಶಿಕ್ಷಣ ಶಿಕ್ಷಕರಿಗೆ ಗೌರವಧನ ನೀಡುವ ಕುರಿತು ಮುಖ್ಯಮಂತ್ರಿ ಜತೆ ಸಮಾಲೋಚಿಸುತ್ತೇನೆ ಎಂದು ಅವರು ಹೇಳಿದರು. ಮುಂದಿನ ವರ್ಷದಿಂದ ಎಲ್ಲ ತಾಲೂಕಿನಲ್ಲೂ ಯೋಗ ಸ್ಪರ್ಧೆಯನ್ನು ಕಡ್ಡಾಯಗೊಳಿಸಲು ಸೂಚನೆ ನೀಡಲಾಗಿದೆ. ಸೇವಾದಳ ಮತ್ತು ಸ್ಕೌಟ್ ವಿಭಾಗವನ್ನು ಶಿಕ್ಷಣ ಇಲಾಖೆಯಡಿ ತರುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
|