ಟ್ರಕ್ ಮಾಲೀಕರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಎರಡನೇ ಮಾತುಕತೆಯೂ ವಿಫಲವಾದ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ದೇಶವ್ಯಾಪಿ ಮುಷ್ಕರ ನಡೆಸಲು ಟ್ರಕ್ ಮಾಲೀಕರು ನಿರ್ಧರಿಸಿದ್ದಾರೆ.
ಡೀಸೆಲ್‌ಗೆ 10 ರೂಪಾಯಿ ಇಳಿಕೆ ಮತ್ತು ಸೇವಾ ತೆರಿಗೆ ರದ್ದು ಮಾಡಬೇಕು ಎಂಬ ಟ್ರಕ್ ಮಾಲೀಕರ ಬೇಡಿಕೆ ಈಡೇರಿಕೆಗೆ ನಿರಾಕರಿಸಿದ ಬೆನ್ನಲ್ಲೆ ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ರಾಜ್ಯದಲ್ಲಿ ಗ್ಯಾಸ್ ಟ್ಯಾಂಕರ್ ಮುಷ್ಕರ ಶನಿವಾರವೂ ಮುಂದುವರೆದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಡುಗೆ ಅನಿಲ ಸಿಲಿಂಡರ್‌ಗೆ ಬೇಡಿಕೆ ಹೆಚ್ಚತೊಡಗಿದೆ. ಒಂದು ವೇಳೆ ಲಾರಿ ಮಾಲೀಕರ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ರಾಜ್ಯದಲ್ಲಿ ಸೋಮವಾರವೂ ಗ್ಯಾಸ್ ಅಭಾವ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ನಿಟ್ಟಿನಲ್ಲಿ ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಷಣ್ಮುಗಪ್ಪ ನೇತೃತ್ವದ ತಂಡ ದೆಹಲಿಗೆ ಪ್ರಯಾಣ ಬೆಳೆಸಲಿದೆ.
|