ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜ.16ರಂದು ಎಂ.ಜಿ.ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಅನಿರ್ದಿಷ್ಟ ಕಾಲ ಧರಣಿ ನಡೆಸುವುದಾಗಿ ತಿಳಿಸಿದೆ.
ನಿವೃತ್ತರಾಗುವ ಕಾರ್ಯಕರ್ತೆಯರಿಗೆ ಒಂದು ಲಕ್ಷ ಮತ್ತು ಸಹಾಯಕಿಯರಿಗೆ 50 ಸಾವಿರ ಪರಿಹಾರ ಧನ ನೀಡಬೇಕು. ಕಾರ್ಯಕರ್ತೆಯರಿಗೆ ಮಾಸಿಕ ಮೂರು ಸಾವಿರ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಅಧ್ಯಕ್ಷ ಜಿ.ಆರ್. ಶಿವಶಂಕರ್ ಹೇಳಿದರು.
ಜಾತಿ ನಿಂದನೆಗೆ ತಡೆ ಹಾಕುವ ಕಾನೂನು ರಚಿಸಬೇಕು ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸವಿತಾ ಸಮಾಜವನ್ನು ಪ್ರವರ್ಗ 2 ಎ ಮತ್ತು 3 ಬಿ ಯಿಂದ ಪ್ರವರ್ಗ 1ಕ್ಕೆ ಸೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘ ಜ.6ರಂದು ಮಲ್ಲೇಶ್ವರ ಆಟದ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. |