ಉಪಚುನಾವಣೆಯಲ್ಲಿ ಸೋಲಿನ ರುಚಿಕಂಡು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೋಮವಾರ ಕರೆದಿರುವ ಆತ್ಮಾವಲೋಕಲ ಸಭೆಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.ಉಪಚುನಾವಣೆಯಲ್ಲಿ ಎಲ್ಲಾ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿತ್ತು. ಆ ನಿಟ್ಟಿನಲ್ಲಿ ಸೋಲಿಗೆ ಕಾರಣಗಳನ್ನು ಪತ್ತೆ ಹಚ್ಚಲು ಮತ್ತು ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸೋಮವಾರ ಆತ್ಮಾವಲೋಕನ ಸಭೆ ಕರೆದಿದೆ.ಇಂದು ಕರೆದಿರುವ ಸಭೆಗೆ ತಾನು ಆಗಮಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರಿಗೆ ದೂರವಾಣಿ ಮೂಲಕ ತಿಳಿಸಿರುವುದಾಗಿ ಸಿದ್ದರಾಮಯ್ಯ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.ಆ ನಿಟ್ಟಿನಲ್ಲಿ ಸಿದ್ದರಾಮಯ್ಯನವರು ಹೊಸ ಪಕ್ಷ ಕಟ್ಟುವುದು ಬಹುತೇಕ ಖಚಿತವಾದಂತಾಗಿದ್ದು, ಜನವರಿ 8ರ ಬಳಿಕ ತಮ್ಮ ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿ, ಹೊಸ ಪಕ್ಷದ ಗುಟ್ಟನ್ನು ಬಯಲು ಮಾಡಲಿದ್ದಾರೆಂದು ಸಿದ್ದರಾಮಯ್ಯ ಅವರ ಆಪ್ತ ವಲಯ ಹೇಳಿದೆ. |