ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಉಂಟಾಗಿದ್ದ ವಿದ್ಯುತ್ ಕ್ಷಾಮ ನೀಗಿಸಿದ್ದೇವೆ. ಈಗ ರಾಜ್ಯದ ಯಾವುದೇ ಭಾಗದಲ್ಲೂ ವಿದ್ಯುತ್ ಸಮಸ್ಯೆ ಉಂಟಾಗಿಲ್ಲ. ಈಗಿನ ಯಥಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ವಿದ್ಯುತ್ ಸಮಸ್ಯೆ ನೀಗಿಸಲು ಜಿಂದಾಲ್ ಮತ್ತು ಜಿಎಂಆರ್ ಕಂಪೆನಿಗಳಿಂದ ತಲಾ 450 ಮತ್ತು 200 ಮೆಗಾ ವ್ಯಾಟ್ ವಿದ್ಯುತ್ತನ್ನು ಖರೀದಿಸಲಾಗುತ್ತದೆ ಎಂದರು. ಅಲ್ಲದೇ ಹೊರ ರಾಜ್ಯಗಳಿಂದಲೂ ವಿದ್ಯುತ್ ಖರೀದಿಗೆ ಮುಂದಾಗಿದ್ದೇವೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು. |