ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸದಿರುವುದು ಅಶಿಸ್ತು ಅಲ್ಲ ಎಂದು ಪ್ರತಿಕ್ರಿಯಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ತಾನೇನು ತಪ್ಪು ಮಾಡಿಲ್ಲ ಎಂದು ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿಯಾಗಿದೆ, ತಾವು ಮಾಡಿದ್ದೇ ಸರಿ, ಯಾವುದೇ ತಪ್ಪು ನಡೆದಿಲ್ಲ ಎಂದು ತಮ್ಮ ನಿಲುವಿಗೆ ಸಮಜಾಯಿಷಿ ನೀಡಿದರು.
ಕೆಪಿಸಿಸಿ ಸೋಮವಾರ ಸಂಜೆ ಕರೆದಿದ್ದ ಆತ್ಮಾವಲೋಕನ ಸಭೆಗೆ ನಾನು ಭಾಗವಹಿಸುತ್ತಿಲ್ಲ ಎಂದು ಅಧ್ಯಕ್ಷ ದೇಶಪಾಂಡೆ ಅವರಿಗೆ ಮೊದಲೇ ತಿಳಿಸಲಾಗಿತ್ತು. ಆ ನಿಟ್ಟಿನಲ್ಲಿ ಅಶಿಸ್ತಿನ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕಾರಣದಲ್ಲಿ ಯಾವಾಗ ಬೇಕಾದರೂ,ಯಾವುದೇ ಬೆಳವಣಿಗೆ ಆಗಬಹುದು. ಆ ಬಗ್ಗೆ ಈಗಲೇ ಏನೂ ಹೇಳಲಾಗದು ಎಂದು ಮುಂದಿನ ರಾಜಕೀಯ ನಡೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದರು. |