ಸಮಾಜವಾದಿ ಪಕ್ಷದ ರಾಜ್ಯ ನಾಯಕ, ಲೋಕಸಭಾ ಸದಸ್ಯ ಸಾರೇಕೊಪ್ಪ ಬಂಗಾರಪ್ಪ ಅವರು ಮತ್ತೆ ಕಾಂಗ್ರೆಸ್ ಪಕ್ಷ ಸೇರಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಹಸಿರು ನಿಶಾನೆ ತೋರಿಸಿದೆ.
ಬಂಗಾರಪ್ಪ ಅವರೊಂದಿಗೆ ಸಮಾಜವಾದಿ ಪಕ್ಷದ ರಾಜ್ಯ ಘಟಕವೂ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನ ಆಗಲಿದೆ. ಬಂಗಾರಪ್ಪ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಳುಹಿಸಿರುವ ಶಿಫಾರಸನ್ನು ಕೆಪಿಸಿಸಿ ಸೋಮವಾರ ನಡೆದ ಆತ್ಮಾವಲೋಕನ ಸಭೆಯಲ್ಲಿ ಪರಿಶೀಲಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಈ ಕುರಿತು ಬಂಗಾರಪ್ಪ ಅವರ ಜತೆ ಮಾತುಕತೆ ನಡೆಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದೇಶಪಾಂಡೆ ಹೇಳಿದ್ದಾರೆ.
ಬಂಗಾರಪ್ಪ ಅವರು ಹಿರಿಯ ನಾಯಕರು, ಅವರು ಕಾಂಗ್ರೆಸ್ ಪಕ್ಷ ಸೇರುವುದಾದರೆ ಸ್ವಾಗತಿಸುವುದಾಗಿ ಅವರು ಈ ಸಂದರ್ಭದಲ್ಲಿ ತಿಳಿಸಿದರು. |