ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾಗಿ ನ್ಯಾಯಮೂರ್ತಿ ವಿ.ಎಸ್.ಮಳಿಮಠ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ನವಪರ್ವ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಹಿರಿಯ ನ್ಯಾಯಮೂರ್ತಿ ವಿ.ಎಸ್.ಮಳಿಮಠ್ ಅವರನ್ನು ರಾಜ್ಯ ಕಾನೂನು ಆಯೋಗದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದರು.
ಕಾನೂನು ವಿಶ್ವವಿದ್ಯಾಲಯದಲ್ಲಿ ವಿಶೇಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್.ಪಾಟೀಲ್ ಅವರನ್ನು ನೂತನ ಕುಲಪತಿಯನ್ನಾಗಿ ನೇಮಕ ಮಾಡಲಾಗುವುದು ಎಂದು ಸಚಿವರು ತಿಳಿಸಿದರು. |