ಹಿರಿಯ, ಮುತ್ಸದ್ದಿ ಮುಖಂಡ ಎನಿಸಿಕೊಂಡ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಯಾವುದೇ ಪ್ರಯೋಜನವಾಗಿಲ್ಲ ಎಂದು ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಪ್ರಚಾರ ಕಾರ್ಯಕ್ಕೆ ಗೈರು ಹಾಜರಾಗಿರುವ ಹಾಗೂ ಅವರಿಂದ ಪಕ್ಷಕ್ಕೆ ಆಗಿರುವ ಲಾಭದ ಕುರಿತು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಮೊಯ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನಂತಹವರು ಕಾಂಗ್ರೆಸ್ ಪಕ್ಷಕ್ಕೆ ಬಂದು ಯಾವುದೇ ಲಾಭವಾಗಿಲ್ಲ, ಅದನ್ನು ನಾವು ಚುನಾವಣೆಯಲ್ಲಿ ಗಮನಿಸಿದ್ದೇವೆ ಎಂಬುದಾಗಿ ಟೀಕಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು ಅದಕ್ಕೆ ಅದರದ್ದೇ ಆದ ಸ್ಥಾನಮಾನ ಇದೆ ಎಂದು ಹೇಳಿದರು. |