ನೈಸ್ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿರುವ ಅಂಶ ಬಹಿರಂಗಗೊಂಡಿದ್ದು, ಪತ್ರದ ಬಗ್ಗೆ ವಿವರಣೆ ನೀಡುವಂತೆ ನ್ಯಾಯಾಲಯ ಗೌಡರಿಗೆ ನೋಟಿಸ್ ಜಾರಿ ಮಾಡಿದೆ.ನೈಸ್ ವಿವಾದ ಈಗಾಗಲೇ ನ್ಯಾಯಾಲಯದ ವಿಚಾರಣೆಯಲ್ಲಿದೆ. ಆದರೂ ಗೌಡರು ಪತ್ರ ಬರೆದಿರುವ ಬಗ್ಗೆ ನ್ಯಾಯಾಧೀಶರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ಈಗಾಗಲೇ ನ್ಯಾಯಾಲಯದ ವಿಚಾರಣೆಯಲ್ಲಿರುವ ನೈಸ್ ಕುರಿತು ಗೌಡರು ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಸೇರಿದಂತೆ ಎಲ್ಲ ಸಿಜೆಗಳಿಗೂ ಪತ್ರ ಬರೆದಿರುವುದಾಗಿ ನ್ಯಾಯಪೀಠ ತಿಳಿಸಿದೆ. ಅಲ್ಲದೇ ಪತ್ರದ ಜೊತೆಗೆ ನೈಸ್‌ಗೆ ಸಂಬಂಧಿಸಿದ ಪುಸ್ತಕವನ್ನು ಕೂಡ ಕಳುಹಿಸಿರುವುದಾಗಿ ಹೇಳಿದೆ. ಗೌಡರು ಏನೇ ಹೇಳುವುದಿದ್ದರು ಕೂಡ ಖುದ್ದಾಗಿ ಅಥವಾ ವಕೀಲರ ಮೂಲಕ ನ್ಯಾಯಾಲಯಕ್ಕೆ ವಿವರಣೆ ನೀಡಬೇಕು ಎಂದು ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಸೂಚಿಸಿದ್ದು, ಫೆಬ್ರುವರಿ ಮೊದಲ ವಾರದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. |