ರಾಜ್ಯದಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ನಿಗಮದ(ಎನ್‌ಟಿಪಿಸಿ)ನಾಲ್ಕು ಸಾವಿರ ಮೆಗಾವಾಟ್ ಸಾಮರ್ಥ್ಯದ ಶಾಖೋತ್ಪನ್ನ ವಿದ್ಯುತ್ ಘಟಕ ಸ್ಥಾಪನೆ ಸೇರಿದಂತೆ ಜಂಟಿ ಸಹಭಾಗಿತ್ವದಲ್ಲಿ 6900ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಮಹತ್ವದ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಲಾಯಿತು.
ವಿಜಾಪುರ ಜಿಲ್ಲೆ ಕೂಡಗಿಯಲ್ಲಿ ನಾಲ್ಕು ಸಾವಿರ ಮೆಗಾವಾಟ್,ರಾಯಚೂರು ಜಿಲ್ಲೆಯ ಯರಮರಸ್, ಯಲ್ಲಾಪುರದಲ್ಲಿ 2,400 ಮೆಗಾವಾಟ್ ಸಾಮರ್ಥ್ಯದ ಶಾಖೋತ್ಪನ್ನ ವಿದ್ಯುತ್ ಘಟಕ ಹಾಗೂ ಉತ್ತರ ಕರ್ನಾಟಕದ ಆರು ಕಡೆ 500ಮೆಗಾವಾಟ್ ಸಾಮರ್ಥ್ಯದ ಪವನ ವಿದ್ಯುತ್ ಘಟಕಗಳ ಸ್ಥಾಪನೆ ಸಂಬಂಧ ಒಡಂಬಡಿಕೆ ಮಾಡಿಕೊಳ್ಳಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ಉತ್ಪಾದನೆ ಸಂಬಂಧ ಒಪ್ಪಂದ ಆಗಿರುವುದು ಕರ್ನಾಟಕದಲ್ಲಿ ಇದೇ ಪ್ರಥಮವಾಗಿದೆ. ಆ ನಿಟ್ಟಿನಲ್ಲಿ ಈ ಯೋಜನೆ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದ್ದು,ಇದರಿಂದ ಪ್ರತಿದಿನ 80ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುವ ನಿರೀಕ್ಷೆ ಇದೆ. |