ಮಾಜಿ ಸಂಸದ ಮಾದೇಗೌಡರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮಂಡ್ಯದ ನ್ಯಾಯಾಲಯ ವಜಾಗೊಳಿಸಿದೆ.
ಉಪ ಚುನಾವಣೆಯ ಮತ ಎಣಿಕೆ ನಂತರ ಡಿ.ಸಿ.ತಮ್ಮಣ್ಣ ಅವರ ಬೆಂಬಲಿಗರು ಎನ್ನಲಾದ ಕೆಲವರು ಮಂಡ್ಯದ ಗಾಂಧಿ ಭವನದ ಮೇಲೆ ದಾಳಿ ನಡೆಸಿ, ಮಾದೇಗೌಡ ಮೇಲೆ ಹಲ್ಲೆ ಮಾಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ಹಿನ್ನೆಲೆಯಲ್ಲಿ ಮಂಡ್ಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಮಾದೇಗೌಡರು ಪ್ರತಿಭಟನೆಯನ್ನೂ ಮಾಡಿ,ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು. |