ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 375 ಕೈದಿಗಳನ್ನು ಬಿಡುಗಡೆ ಮಾಡುವ ರಾಜ್ಯ ಸರ್ಕಾರದ ನಿರ್ಧಾರ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಕೈದಿಗಳನ್ನು ಬಿಡುಗಡೆ ಮಾಡುವ ಬಗ್ಗೆ ಬಂಧೀಖಾನೆ ಸಚಿವ ಉಮೇಶ್ ಕತ್ತಿ ಸೋಮವಾರ ನೀಡಿದ್ದ ಹೇಳಿಕೆ ಬಗ್ಗೆ ವಿವರಣೆ ನೀಡುವಂತೆ ನ್ಯಾಯಮೂರ್ತಿ ಎಸ್.ಆರ್.ಬನ್ನೂರಮಠ್ ನೇತೃತ್ವದ ವಿಭಾಗೀಯ ಪೀಠ ರಾಜ್ಯ ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ಐಪಿಸಿ ಅನ್ವಯ ಕೈದಿಗಳು ತಮ್ಮ ಶಿಕ್ಷೆಯ ಅವಧಿ ಪೂರ್ಣಗೊಳಿಸುವ ಮುನ್ನ ಬಿಡುಗಡೆ ಮಾಡಲು ಅವಕಾಶವಿಲ್ಲ. ಇದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಾಗುತ್ತದೆ. ರಾಜ್ಯಪಾಲರಿಗೆ ಈ ಅವಕಾಶವಿದೆ.
ಆದರೆ, ರಾಜ್ಯದಲ್ಲಿ ಇಂತಹ ಯಾವುದೇ ತಿದ್ದುಪಡಿ ಆಗಿಲ್ಲ, ಆ ನಿಟ್ಟಿನಲ್ಲಿ ಕೈದಿಗಳ ಬಿಡುಗಡೆ ಕುರಿತು ವಿವರಣೆ ನೀಡುವಂತೆ ನ್ಯಾಯಪೀಠ ತಾಕೀತು ಮಾಡಿದೆ. |