ಸ್ಥಳೀಯ ಜನರ ವಿರುದ್ಧ ಹಾಗೂ ಬಂಗಾರಪ್ಪ ಕುಟುಂಬದ ವಿರುದ್ಧ ದ್ವೇಷದ ರಾಜಕಾರಣದ ಉದ್ದೇಶದಿಂದಲೇ ದಂಡಾವತಿ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿರುವ ಮುಖ್ಯಮಂತ್ರಿಗಳು ತಾಕತ್ತಿದ್ದರೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿ ಎಂದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಸವಾಲು ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿರುವ ಯಡಿಯೂರಪ್ಪ ಬೇಕಾಬಿಟ್ಟಿಯಾಗಿ ಆಡಳಿತ ನಡೆಸಲು ಬಿಡುವುದಿಲ್ಲ ಎಂದು ಹರಿಹಾಯ್ದಿದ್ದಾರೆ.
ಇದೇ ವೇಳೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿ ಮತ್ತು ಸಂಘ ಪರಿವಾರವನ್ನು ಬೆಳೆಸುವ ರೀತಿಯಲ್ಲಿ ಈ ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ. ಧೈರ್ಯ ಇದ್ದರೆ ಸರ್ವೇ ಕಾರ್ಯ ಮಾಡಲಿ ಎಂದು ಗುಡುಗಿದ್ದಾರೆ.
ಇದರ ವಿರುದ್ಧ ಸಿಂಗೂರು ಮಾದರಿಯಲ್ಲಿ ಶಾಂತಿಯುತ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. |