ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪಂಪ ಪ್ರಶಸ್ತಿಗೆ ಪ್ರೊ. ಟಿ.ವಿ. ವೆಂಕಟಾಚಲ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
ಜನವರಿ 17ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಟಿ.ವಿ. ವೆಂಕಟಾಚಲ ಶಾಸ್ತ್ರಿ 54 ವರ್ಷದಿಂದ ಕೈಗೊಂಡ ಸೇವೆಗೆ ಈಗ ಮನ್ನಣೆ ದೊರೆಕಿದೆ. ದೊಡ್ಡ ವಿದ್ವಾಂಸರಾದ ತಿನಂಶ್ರೀ ಅವರ ನೆರಳಿನಲ್ಲಿ ಬೆಳೆದವನು ನಾನು. ಈಗ ಇಂಥ ಪೀಳಿಗೆ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. |